ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಏರಿಳಿತ ಸಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 836 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 15 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,71,044 ಜನರಿಗೆ ಸೋಂಕು ತಗುಲಿದ್ದು 37683 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 852 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,19,742 ಕ್ಕೆ ಏರಿಕೆಯಾಗಿದೆ. ಇನ್ನು 13,590 ಸಕ್ರಿಯ ಪ್ರಕರಣಗಳಿವೆ. ಇನ್ನು ರಾಜ್ಯಾದ್ಯಂತ 0.57%ನಷ್ಟು ಕೋವಿಡ್ ಖಚಿತತೆಯ ಪ್ರಮಾಣ ಇದೆ. ಹಾಗೂ 1.79%ನಷ್ಟು ಮರಣ ಪ್ರಮಾಣ ಇದೆ. 1,45,085 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 310 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,44,674ಕ್ಕೆ ಏರಿಕೆಯಾಗಿದೆ. 239 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,21,117ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 7 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,117 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,439 ಸಕ್ರಿಯ ಪ್ರಕರಣಗಳಿವೆ.
PublicNext
23/09/2021 10:43 pm