ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದಲ್ಲಿ 24 ಗಂಟೆಯಲ್ಲಿ 31,382 ಹೊಸ ಕೇಸ್ ಪತ್ತೆ, 318 ಮಂದಿ ಸಾವು

ನವದೆಹಲಿ: ಹೆಮ್ಮಾರಿ ಸೋಂಕು ಇನ್ನು ಹೋಗಿಲ್ಲ. ಕೊರೋನಾ 3ನೇ ಅಲೆ ಭೀತಿ ನಡುವೆಯೇ ಕಳೆದ ಗಂಟೆಗೆ ಗಂಟೆಯಲ್ಲಿ ದೇಶದಲ್ಲಿ 31,382 ಕೊರೊನಾ ಕೇಸ್ ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 318 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಕ್ಕೆ ತಲುಪಿದ್ದು, 3,35,94,803 ಸಾವಿನ ಸಂಖ್ಯೆ 4,46,368ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,00,162ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 32,542 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,28,48,273ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 15,65,696 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 55,99,32,709 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 84,15,18,026 ಜನರಿಗೆ ಲಸಿಕೆ ನೀಡಲಾಗಿದೆ.

Edited By : Nirmala Aralikatti
PublicNext

PublicNext

24/09/2021 11:42 am

Cinque Terre

31.99 K

Cinque Terre

0