ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ನಿನ್ನೆಗಿಂತ ಕೊಂಚ ತಗ್ಗಿದೆ. ಕಳೆದ 24 ಗಂಟೆಯಲ್ಲಿ 789 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 23 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,71,833 ಜನರಿಗೆ ಸೋಂಕು ತಗುಲಿದ್ದು 37,706 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 1,050 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,20,792 ಕ್ಕೆ ಏರಿಕೆಯಾಗಿದೆ. ಇನ್ನು 13,306 ಸಕ್ರಿಯ ಪ್ರಕರಣಗಳಿವೆ. 0.58%ನಷ್ಟು ಕೋವಿಡ್ ಖಚಿತತೆಯ ಪ್ರಮಾಣ ಇದೆ. ಇನ್ನು ಮರಣ ಪ್ರಮಾಣ 2.91%ನಷ್ಟು ಇದೆ. ಹಾಗೂ 1,35,581 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕು ತನ್ನ ಇರುವಿಕೆಯನ್ನು ನಿತ್ಯ ತೋರಿಸುತ್ತಲೇ ಇದೆ. ಇಂದು 285 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,44,959 ಕ್ಕೆ ಏರಿಕೆಯಾಗಿದೆ. 273 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,21,390ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 8 ಜನ ಕೊರೊನಾ ಸೋಂಕಿನಿಂದ ಮೃತಪಟ್ಟದಿದ್ದಾರೆ. ಈವೆರಗೂ ಒಟ್ಟು 16,125 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,443 ಸಕ್ರಿಯ ಪ್ರಕರಣಗಳಿವೆ.
PublicNext
24/09/2021 07:02 pm