ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಲು ಸೂಚನೆ

ಬೆಂಗಳೂರು: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬದವರಿಗೆ 1 ಲಕ್ಷ ಪರಿಹಾರ ಧನ ವಿತರಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕಿನಿಂದ ದುಡಿಯುವ ಸದಸ್ಯರನ್ನು ಕಳೆದುಕೊಂಡಂತಹ ಬಿಪಿಎಲ್ ಕುಟಂಬಕ್ಕೆ ಆಸರೆ ನೀಡುವ ನಿಟ್ಟಿನಲ್ಲಿ 1 ರೂ ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಅರ್ಹ ಸಂತ್ರಸ್ತ ಕುಟುಂಬದ ವಾರಸುದಾರರಿಗೆ ನೀಡಲು ಸರ್ಕಾರ ಆದೇಶಿಸಿದೆ.

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದ ಅರ್ಹ ನ್ಯಾಯಬದ್ಧ ವಾರಸುದಾರರಿಗೆ ಕೋವಿಡ್19 ಮರಣ ಪರಿಹಾರ ಧನವನ್ನು ಜಿಲ್ಲಾಧಿಕಾರಿಗಳ ಜಿಲ್ಲಾ ವಿಪತ್ತು ಪರಿಹಾರ ನಿಧಿ ಪಿಡಿ ಖಾತೆಯಿಂದ ಚೆಕ್ ಮೂಲಕ ವಿತರಿಸಲು ಸರ್ಕಾರ ನಿರ್ಧರಿಸಿ ಆದೇಶ ಹೊರಡಿಸಿದೆ.

Edited By : Nagaraj Tulugeri
PublicNext

PublicNext

25/09/2021 02:36 pm

Cinque Terre

55.44 K

Cinque Terre

1