ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬರುತ್ತಿದ್ದು, ಜನರಲ್ಲಿ ಕೋವಿಡ್ ಆತಂಕ ಕೊಂಚ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 787 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,72,620 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.55ಕ್ಕೆ ಕುಸಿದಿದೆ. ಇಂದು 1,40,832 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 775 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,21,567 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 11 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 13,307 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.39ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 276 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,45,235ಕ್ಕೆ ಏರಿಕೆಯಾಗಿದೆ 279 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,21,669ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ನಾಲ್ವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,129ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,436 ಸಕ್ರಿಯ ಪ್ರಕರಣಗಳಿವೆ.
PublicNext
25/09/2021 07:45 pm