ಬೆಂಗಳೂರು : ರಾಜ್ಯದಲ್ಲಿಂದು 775 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2973395 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 140970 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.54% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 860 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2922427 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 09 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37726 ಕ್ಕೆ ಏರಿಕೆಯಾಗಿದೆ. 13213 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.16% ನಷ್ಟಿದೆ.
ಬೆಂಗಳೂರು: ನಗರದಲ್ಲಿ 255 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1245490 ಕ್ಕೆ ಏರಿಕೆಯಾಗಿದೆ. 205 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1221874 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 03 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16132 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7483 ಸಕ್ರಿಯ ಪ್ರಕರಣಗಳಿವೆ.
PublicNext
26/09/2021 07:46 pm