ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಅದರಲ್ಲೂ ಇಂದು 8 ಜಿಲ್ಲೆ (ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿ)ಯಲ್ಲಿ ಒಂದೇ ಒಂದು ಕೊರೊನಾ ಕೇಸ್ ಪತ್ತೆಯಾಗಿಲ್ಲ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 504 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,73,899 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.48ಕ್ಕೆ ಕುಸಿದಿದೆ. ಇಂದು 1,03,800 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 893 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,23,320 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 20 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,746ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 12,804 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 3.96ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 181 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,45,671ಕ್ಕೆ ಏರಿಕೆಯಾಗಿದೆ 265 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,22,139ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,137 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,394 ಸಕ್ರಿಯ ಪ್ರಕರಣಗಳಿವೆ.
PublicNext
27/09/2021 07:07 pm