ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ ನಿನ್ನೆಗಿಂತ ಇಂದು ಕೊಂಚ ಏರಿಕೆ ಕಂಡಿದೆ. ಜೊತೆಗೆ ಇಂದು 7 ಜಿಲ್ಲೆ (ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ)ಯಲ್ಲಿ ಒಂದೇ ಒಂದು ಕೊರೊನಾ ಕೇಸ್ ಪತ್ತೆಯಾಗಿಲ್ಲ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 629 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,74,528 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.67ಕ್ಕೆ ಕುಸಿದಿದೆ. ಇಂದು 93,014 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 782 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,24,102 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 17 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,763ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 12,634 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.70ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 229 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,45,900ಕ್ಕೆ ಏರಿಕೆಯಾಗಿದೆ 199 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,22,338ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಆರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,143 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,418 ಸಕ್ರಿಯ ಪ್ರಕರಣಗಳಿವೆ.
PublicNext
28/09/2021 06:39 pm