ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇನ್ನೂ ಕೊರೊನಾ ಭೀತಿ ಕಡಿಮೆಯಾಗಿಲ್ಲ. ಈ ನಡುವೆ ಇಲಿ ಜ್ವರದ ಭೀತಿ ಕಾಣಿಸಿಕೊಂಡಿದೆ. ಆದ್ರೆ ಇದಕ್ಕೆ ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ರೋಗಕ್ಕೆ ಲೆಪ್ಟೊಸ್ಪೈರೋಸಿಸ್ ಎಂಬ ವೈಜ್ಞಾನಿಕ ಹೆಸರಿದೆ.
ಮೊದಲ ಪ್ರಕರಣವು ಸುಮಾರು 15 ದಿನಗಳ ಹಿಂದೆ ಪತ್ತೆಯಾಯಿತು ಮತ್ತು ಬಹುಪಾಲು ರೋಗಿಗಳು ಚೇತರಿಕೆಯ ಹಾದಿಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.
ಲೆಪ್ಟೊಸ್ಪೈರೋಸಿಸ್ ಅಥವಾ ಇಲಿ ಜ್ವರವು ಲೆಪ್ಟೊಸ್ಪೈರ ಎಂಬ ಬ್ಯಾಕ್ಟೀರಿಯಾದಿಂದ ಬರುತ್ತದೆ, ಇದು ಮೂತ್ರ ಅಥವಾ ಲೋಳೆಯ ಸ್ರವಿಸುವಿಕೆಯಿಂದ ಮನುಷ್ಯರಿಗೆ ಹರಡುತ್ತದೆ. "ರಕ್ತ ಪರೀಕ್ಷೆಗಳ ಮೂಲಕ ರೋಗವನ್ನು ಪತ್ತೆ ಮಾಡಬಹುದು. ಒಬ್ಬ ವ್ಯಕ್ತಿಯು ಕಾಮಾಲೆ, ಕೆಮ್ಮು ಅಥವಾ ಇತರ ತೀವ್ರವಾದ ಉಸಿರಾಟದ ತೊಂದರೆಯ ಲಕ್ಷಣಗಳನ್ನು ಹೊಂದಿದ್ದರೆ, ತಕ್ಷಣವೇ ರಕ್ತ ಪರೀಕ್ಷೆ ಮಾಡಿಸಲು ಸೂಚಿಸಲಾಗುತ್ತದೆ.
PublicNext
29/09/2021 07:52 am