ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ನಿನ್ನೆ (ಬುಧವಾರ) 539 ಕೇಸ್ ಪತ್ತೆಯಾಗಿದ್ದವು. ಸಮಾಧಾನಕರ ವಿಚಾರವೆಂದರೆ ಇಂದು ಸಾವಿನ ಸಂಖ್ಯೆ ಕೊಂಚ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 933 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,76,000 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.81ಕ್ಕೆ ಕುಸಿದಿದೆ. ಇಂದು 1,14,529 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 704 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,25,397 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 14 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,794ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 12,780 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.50ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 291 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,46,430ಕ್ಕೆ ಏರಿಕೆಯಾಗಿದೆ 172 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,22,651ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 5 ಮಂದಿ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,155 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,623 ಸಕ್ರಿಯ ಪ್ರಕರಣಗಳಿವೆ.
PublicNext
30/09/2021 07:46 pm