ಬೆಂಗಳೂರು : ರಾಜ್ಯದಲ್ಲಿಂದು 589 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2976589 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 126932 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.46%ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 887 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2926284 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 13 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37807 ಕ್ಕೆ ಏರಿಕೆಯಾಗಿದೆ. 12469 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.20% ನಷ್ಟಿದೆ.
ಬೆಂಗಳೂರು: ನಗರದಲ್ಲಿ 221 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1246651 ಕ್ಕೆ ಏರಿಕೆಯಾಗಿದೆ. 212 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1222863 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 05 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16160 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7627 ಸಕ್ರಿಯ ಪ್ರಕರಣಗಳಿವೆ.
PublicNext
01/10/2021 06:56 pm