ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಅಳೆದು ತೂಗಿ ಆವರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 636 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ನಾಲ್ವರು ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ,ರಾಜ್ಯದಲ್ಲಿ ಈವರೆಗೂ 29,77,225 ಜನರಿಗೆ ಸೋಂಕು ತಗುಲಿದ್ದು 37,811 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 745 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,27,029ಕ್ಕೆ ಏರಿಕೆಯಾಗಿದೆ. ಇನ್ನು 12,356 ಸಕ್ರಿಯ ಪ್ರಕರಣಗಳಿವೆ. 0.37% ಕೊರೊನಾ ಪಾಸಿಟಿವಿಟಿ ದರ ಇದೆ. ಹಾಗೂ ಮರಣ ಪ್ರಮಾಣ 0.62% ನಷ್ಟಿದೆ. 1,69,319 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದೆ. ಇಂದು 245 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,46,896 ಕ್ಕೆ ಏರಿಕೆಯಾಗಿದೆ. 206 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,23,069ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,161 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,665 ಸಕ್ರಿಯ ಪ್ರಕರಣಗಳಿವೆ.
PublicNext
02/10/2021 07:18 pm