ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತ ಸಂಖ್ಯೆ ಇಳಿಕೆ ಕಂಡಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 664 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,77,889 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.52ಕ್ಕೆ ಕುಸಿದಿದೆ. ಇಂದು 1,26,386 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 711 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,27,740 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 8 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,819ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 12,301 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.20ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 196 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,47,092ಕ್ಕೆ ಏರಿಕೆಯಾಗಿದೆ 258 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,23,327ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 3 ಮಂದಿ ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,164 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,600 ಸಕ್ರಿಯ ಪ್ರಕರಣಗಳಿವೆ.
PublicNext
03/10/2021 06:32 pm