ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ಕೋವಿಡ್ ಕೇಸ್ ಭಾರೀ ಇಳಿಕೆ : ಕೇವಲ 397 ಜನರಿಗೆ ಅಂಟಿದ ಸೋಂಕು

ಬೆಂಗಳೂರು: ಹೆಮ್ಮಾರಿ ಸೋಂಕಿನ ಹಾವಳಿ ಇನ್ನು ಸಂಪೂರ್ಣವಾಗಿ ತೊಲಗಿಲ್ಲ. ಆದರೆ ಸದ್ಯ ಕೊಂಚ ಸಮಾಧಾನದ ಸುದ್ದಿ ಅಂದ್ರೆ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿದೆ. ಹೌದು ಇಂದು ರಾಜ್ಯದಲ್ಲಿ 397 ಜನರಿಗೆ ಕೊರೊನಾ ಸೋಂಕು ತಗುಲಿದೆ. 693 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು 11,992 ಸಕ್ರಿಯ ಪ್ರಕರಣಗಳಿವೆ.

ಇಂದು 78,958 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.50 ರಷ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 166 ಜನರಿಗೆ ಸೋಂಕು ತಗುಲಿದ್ದು, 121 ಜನ ಬಿಡುಗಡೆಯಾಗಿದ್ದಾರೆ. 5 ಜನ ಸೋಂಕಿಗೆ ಬಲಿಯಾಗಿದ್ದಾರೆ. 7640 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

04/10/2021 06:35 pm

Cinque Terre

39.3 K

Cinque Terre

0