ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅವಾಂತರ ಇನ್ನೂ ಕಡಿಮೆ ಆಗಿಲ್ಲ. ಕಳೆದ 24 ಗಂಟೆಯಲ್ಲಿ 397 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 13 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,78,286 ಜನರಿಗೆ ಸೋಂಕು ತಗುಲಿದ್ದು, 37,832 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 693 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,28,433ಕ್ಕೆ ಏರಿಕೆಯಾಗಿದೆ. ಇನ್ನು 11,992 ಸಕ್ರಿಯ ಪ್ರಕರಣಗಳಿವೆ. ಇನ್ನು ಕೋವಿಡ್ ಪಾಸಿಟಿವಿಟಿ ಪ್ರಮಾಣ 0.50%ನಷ್ಟಿದೆ ಹಾಗೂ ಮರಣ ಪ್ರಮಾಣ 3.27%ನಷ್ಟಿದೆ. ಇದರೊಂದಿಗೆ 78,958 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ಕೊರೊನಾ ಎಂಬ ಶನಿ ಬೆಂಗಳೂರು ಮಹಾನಗರವನ್ನು ಇನ್ನೂ ಬಿಟ್ಟಿಲ್ಲ. ಇಂದು 166 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,47,258ಕ್ಕೆ ಏರಿಕೆಯಾಗಿದೆ. 121 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,23,448ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಐದು ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,169 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,640 ಸಕ್ರಿಯ ಪ್ರಕರಣಗಳಿವೆ.
PublicNext
04/10/2021 07:19 pm