ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ಇನ್ನೂ ನಿಂತಿಲ್ಲ. ಕಳೆದ 24 ಗಂಟೆಯಲ್ಲಿ 442 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 7 ಜನ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,79,773 ಜನರಿಗೆ ಸೋಂಕು ತಗುಲಿದ್ದು 37,861 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 635 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,30,264 ಕ್ಕೆ ಏರಿಕೆಯಾಗಿದೆ. ಇನ್ನು 11,619 ಸಕ್ರಿಯ ಪ್ರಕರಣಗಳಿವೆ. ಹಾಗೂ ಕೋವಿಡ್ ನಿಶ್ಚಿತತೆಯ ಪ್ರಮಾಣ 0.36%ನಷ್ಟಿದೆ. ಇನ್ನು ಮರಣ ಪ್ರಮಾಣ 1.58%ನಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,22,647 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 166 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,47,830 ಕ್ಕೆ ಏರಿಕೆಯಾಗಿದೆ. 173 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,24,089 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,177 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 7,563 ಸಕ್ರಿಯ ಪ್ರಕರಣಗಳಿವೆ.
PublicNext
07/10/2021 07:53 pm