ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಆದರೆ ನಿನ್ನೆ (ಶುಕ್ರವಾರ) 397 ಮಂದಿಗೆ ಸೋಂಕು ದೃಢಪಟ್ಟಿದ್ದರೆ, ಇಂದು ಕೊಂಚ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 451 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,80,621 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.37ಕ್ಕೆ ಕುಸಿದಿದೆ. ಇಂದು 1,20,045 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 1,455 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,32,322 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 9 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,875ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 10,395 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.99ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 187 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,48,157ಕ್ಕೆ ಏರಿಕೆಯಾಗಿದೆ 1,009 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,25,246ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,183 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,727 ಸಕ್ರಿಯ ಪ್ರಕರಣಗಳಿವೆ.
PublicNext
09/10/2021 06:31 pm