ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಶುಕ್ರವಾರ 397 ಮಂದಿಗೆ, ನಿನ್ನೆ (ಶನಿವಾರ) 451 ಜನರಿಗೆ ಸೋಂಕು ದೃಢಪಟ್ಟಿತ್ತು. ನಿನ್ನೆಗಿಂತ ಇಂದು ಸೋಂಕಿತರ ಸಂಖ್ಯೆ ಕೊಂಚ ಇಳಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 406 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,81,027 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.35ಕ್ಕೆ ಕುಸಿದಿದೆ. ಇಂದು 1,14,365 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 637 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,32,959 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 10 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,885ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 10,154 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.46ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 156 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,48,313ಕ್ಕೆ ಏರಿಕೆಯಾಗಿದೆ 229 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,25,475ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,188 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,649 ಸಕ್ರಿಯ ಪ್ರಕರಣಗಳಿವೆ.
PublicNext
10/10/2021 07:56 pm