ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಭಾರಿ ತಗ್ಗಿದೆ. ಶನಿವಾರ 451 ಜನರಿಗೆ ಹಾಗೂ ಭಾನುವಾರ 406 ಮಂದಿಗೆ ಸೋಂಕು ದೃಢಪಟ್ಟಿತ್ತು. ಆದರೆ ಇಂದು ಸೋಂಕಿತರ ಸಂಖ್ಯೆ 400ರ ಗಡಿ ದಾಟಿಲ್ಲ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 373 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,81,400 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.45ಕ್ಕೆ ಕುಸಿದಿದೆ. ಇಂದು 82,853 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,33,570 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 10 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,895ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 9,906 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.68ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 146 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,48,459ಕ್ಕೆ ಏರಿಕೆಯಾಗಿದೆ 210 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,25,685ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,193 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,580 ಸಕ್ರಿಯ ಪ್ರಕರಣಗಳಿವೆ.
PublicNext
11/10/2021 06:45 pm