ನವದೆಹಲಿ: ಕೊರೊನಾ ಮಹಾಮಾರಿ ವಿರುದ್ಧದ ಹೋರಾಟ ದೇಶದಲ್ಲಿ ಮುಂದುವರೆದಿದ್ದು, ಈಗಾಗಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ 2ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡಲು ತಜ್ಞರ ಸಮಿತಿಯಿಂದ ಶಿಫಾರಸು ಮಾಡಲಾಗಿದೆ.
ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆ ಮಕ್ಕಳಿಗೆ ನೀಡಲು ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದು, ಹೀಗಾಗಿ ತುರ್ತು ಬಳಕೆಗೆ ಅನುಮತಿ ನೀಡುವಂತೆ ಡಿಸಿಜೆಐಗೆ ಶಿಫಾರಸು ಮಾಡಿದೆ.
ಎರಡು ವರ್ಷ ಮೆಲ್ಪಟ್ಟ ಮಕ್ಕಳ ಮೇಲೆ ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆ ಪ್ರಯೋಗ ನಡೆಸಲಾಗಿತ್ತು. ಸೆಪ್ಟೆಂಬರ್ ತಿಂಗಳಲ್ಲಿ 18ವರ್ಷದೊಳಗಿನ ಮಕ್ಕಳ ಮೇಲೆ 1,2 ಹಾಗೂ 3ನೇ ಹಂತದ ಪ್ರಯೋಗ ಪೂರ್ಣಗೊಳಿಸಿತ್ತು. ಅದರ ಕ್ಲಿನಿಕಲ್ ಪ್ರಯೋಗದ ದತ್ತಾಂಶವನ್ನ ಡಿಸಿಜೆಐಗೆ ಸಲ್ಲಿಕೆ ಮಾಡಲಾಗಿದೆ.
PublicNext
12/10/2021 09:40 pm