ಬೆಂಗಳೂರು : ರಾಜ್ಯದಲ್ಲಿಂದು 310 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2982399 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 114967 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.26% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2934870 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 06 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37922 ಕ್ಕೆ ಏರಿಕೆಯಾಗಿದೆ. 9578 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.93% ನಷ್ಟಿದೆ.
ಬೆಂಗಳೂರು: ನಗರದಲ್ಲಿ 148 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1248892 ಕ್ಕೆ ಏರಿಕೆಯಾಗಿದೆ. 82 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1226049 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 02 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16205 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6637 ಸಕ್ರಿಯ ಪ್ರಕರಣಗಳಿವೆ.
PublicNext
14/10/2021 06:32 pm