ಬೆಂಗಳೂರು: ರಾಜ್ಯದ ಏಳು ಜಿಲ್ಲೆಗಳಲ್ಲಿ ಇಂದು ಒಂದೇ ಒಂದು ಕೋವಿಡ್ ಕೇಸ್ ಪತ್ತೆಯಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಆತಂಕ ನಿಧಾನವಾಗಿ ಕಡಿಮೆ ಆಗುತ್ತಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 470 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,82,869 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.50ಕ್ಕೆ ಕುಸಿದಿದೆ. ಇಂದು 93,806 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 368 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,35,238 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 9 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37,931ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 9,671 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.91ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 232 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,49,124ಕ್ಕೆ ಏರಿಕೆಯಾಗಿದೆ 122 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,26,171ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,206 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,746 ಸಕ್ರಿಯ ಪ್ರಕರಣಗಳಿವೆ.
PublicNext
15/10/2021 06:35 pm