ನವದೆಹಲಿ: ದೇಶದಲ್ಲಿ ಕಳೆದ ಹಲವು ದಿನಗಳಿಂದ ಮಾಹಾಮಾರಿ ಕೊರೊನಾ ಕಂಟ್ರೋಲ್ಗೆ ಸಿಕ್ಕಿದೆ. ನಿನ್ನೆ ಶುಕ್ರವಾರದಿಂದ ಇಂದು (ಶನಿವಾರ ಅಕ್ಟೋಬರ 16) ಬೆಳಿಗ್ಗೆ 8ಗಂಟೆವರೆಗಿನ ವರದಿ ಪ್ರಕಾರ ದೇಶದಲ್ಲಿ 15,981 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಹಾಗೂ ಇದೇ ಅವಧಿಯಲ್ಲಿ 166 ಮಂದಿ ಸಾವನ್ನಪ್ಪಿದ್ದಾರೆಂದು ವರದಿ ಮೂಲಕ ತಿಳಿದುಬಂದಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,53,573ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,01,632ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 17,861 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,33,99,961ಕ್ಕೆ ತಲುಪಿದೆ.
PublicNext
16/10/2021 11:56 am