ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಅವಧಿಯಲ್ಲಿ ದೇಶದಲ್ಲಿ 14,146 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 144 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,67,719ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,52,124ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,95,846ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 19,788 ಮಂದಿ ಗುಣಮುಖರಾಗುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 3,34,19,749ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 11,00,123 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 59,09,35,381 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇಲ್ಲಿಯವರೆಗೂ ಒಟ್ಟಾರೆ 97,65,89,540 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ.
PublicNext
17/10/2021 01:21 pm