ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಹಾವಳಿ ತಗ್ಗುತ್ತಿದೆ ಇಂದು 214 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2983673 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 77901 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.27% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2936527 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 12 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37953 ಕ್ಕೆ ಏರಿಕೆಯಾಗಿದೆ. 9164 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 5.61% ನಷ್ಟಿದೆ.
ಬೆಂಗಳೂರು: ನಗರದಲ್ಲಿ 83 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1249501 ಕ್ಕೆ ಏರಿಕೆಯಾಗಿದೆ. 151 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1226541 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 04 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16214 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6745 ಸಕ್ರಿಯ ಪ್ರಕರಣಗಳಿವೆ.
PublicNext
18/10/2021 06:35 pm