ನವದೆಹಲಿ: ದೇಶದಲ್ಲಿ ಕೋವಿಡ್-19 ನಿಧಾನವಾಗಿ ತಗ್ಗುತ್ತಿದೆ. ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 14,623 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಅವಧಿಯಲ್ಲಿ 197 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,08,996ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,52,651ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 1,78,098ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 19,446 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,34,78,247ಕ್ಕೆ ತಲುಪಿದೆ. ಇನ್ನು ಒಂದೇ ದಿನ 13,23,702 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈವರೆಗೂ ಒಟ್ಟಾರೆ 99,12,82,283 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
PublicNext
20/10/2021 11:20 am