ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಇರುವಿಕೆಯನ್ನು ಎಚ್ಚರಿಸುತ್ತಿದೆ. ಕಳೆದ 24 ಗಂಟೆಯಲ್ಲಿ 365 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಹಾಗೂ ಇದೇ ಸಮಯದಲ್ಲಿ,8 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,84,849 ಜನರಿಗೆ ಸೋಂಕು ತಗುಲಿದ್ದು, 37,984 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 443 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2937848 ಕ್ಕೆ ಏರಿಕೆಯಾಗಿದೆ. ಇನ್ನು 8988 ಸಕ್ರಿಯ ಪ್ರಕರಣಗಳಿವೆ. ಹಾಗೂ ಕೊರೊನಾ ಖಚಿತತೆಯ ಪ್ರಮಾಣ 0.31%ನಷ್ಟಿದೆ. ಮತ್ತು ಮರಣ ಪ್ರಮಾಣ 2.19%ನಷ್ಟಿದೆ. ರಾಜ್ಯದಾದ್ಯಂತ ಕಳೆದ 24 ಗಂಟೆಗಳಲ್ಲಿ 1,17,713 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 210 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,50,125ಕ್ಕೆ ಏರಿಕೆಯಾಗಿದೆ. 220ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,27,149 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 4 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,229 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,746 ಸಕ್ರಿಯ ಪ್ರಕರಣಗಳಿವೆ.
PublicNext
21/10/2021 07:26 pm