ಹುಬ್ಬಳ್ಳಿ: ಮಹಾಮಾರಿ ಕೋವಿಡ್ ವೈರಸ್‌ಗೆ ದೇಶದ ಜನ ತತ್ತರಿಸಿ ಹೋಗಿದ್ದರು. ಕೊರೊನಾವನ್ನು ತೊಲಗಿಸಲು ಸರ್ಕಾರ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು. ಕೇವಲ ಒಂಬತ್ತು ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು ಹಾಕಲಾಗಿದೆ. ಈಗ ಭಾರತ ಶತಕೋಟಿ ಡೋಸ್ ಲಸಿಕೆ ವಿತರಿಸಿದ ಮಹತ್ವದ ಮೈಲಿಗಲ್ಲು ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ 100 ಕೋಟಿ ಲಸಿಕಾ ಸಂಭ್ರಮವನ್ನು ಆಚರಿಸುತ್ತಿದೆ. ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದೀಪ ಬೆಳಗುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.
ಇದೇ ವೇಳೆ ಮಗುವನ್ನು ನ್ಯುಮೋನಿಯಾದಿಂದ ರಕ್ಷಿಸಬೇಕು ಎಂದ ಸಿಎಂ ಮಗುವಿಗೆ ಲಸಿಕೆ ಹಾಕಿಸುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ, ವಿಧಾಸ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ್ ಮುನೇನಕೊಪ್ಪ, ಜಿಲ್ಲಾಧಿಕಾರಿ ನಿತೀಶ ಪಾಟೀಲ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ಉಪಸ್ಥಿತರಿದ್ದರು.
PublicNext
22/10/2021 10:13 am