ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಹಾವಳಿ ತಗ್ಗುತ್ತಿದೆ ಇಂದು 378 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2985227 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 103121ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.36% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 464 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2938312 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 11 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 37995 ಕ್ಕೆ ಏರಿಕೆಯಾಗಿದೆ. 9074 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.91% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 195 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1250320 ಕ್ಕೆ ಏರಿಕೆಯಾಗಿದೆ. 239 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1227388 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 07 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16236 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6695 ಸಕ್ರಿಯ ಪ್ರಕರಣಗಳಿವೆ.
PublicNext
22/10/2021 06:58 pm