ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ನಿನ್ನೆಗಿಂತ ಇಂದು ಕೊಂಚ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 388 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಹಾಗೂ ಸೋಂಕಿನಿಂದ ಐವರು ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,85,986 ಜನರಿಗೆ ಸೋಂಕು ತಗುಲಿದ್ದು 38,007 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,39,239 ಕ್ಕೆ ಏರಿಕೆಯಾಗಿದೆ. ಇನ್ನು 8,711 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.32%ನಷ್ಟಿದೆ. ಹಾಗೂ ಮರಣ ಪ್ರಮಾಣ 1.28%ನಷ್ಟಿದೆ. ಇದೇ ಅವಧಿಯಲ್ಲಿ 1,17,827 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕು ಇತ್ತೀಚಿನ ದಿನಗಳಲ್ಲಿ ಕೊಂಚ ತಗ್ಗಿದೆ. ಆದರೂ ತನ್ನ ಅಸ್ತಿತ್ವ ತೋರ್ಪಡಿಸುತ್ತಲೇ ಇದೆ. ಇಂದು 194 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,50,707 ಕ್ಕೆ ಏರಿಕೆಯಾಗಿದೆ. 448 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,27,966ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,244 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 6,496 ಸಕ್ರಿಯ ಪ್ರಕರಣಗಳಿವೆ.
PublicNext
24/10/2021 07:54 pm