ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಅಳೆದು ತೂಗಿ ಆವರಿಸುತ್ತಿದೆ. ಸೋಂಕಿನ ಹರಡುವಿಕೆ ಪ್ರಮಾಣ ನಿನ್ನೆಗಿಂತ ಇಂದು ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 290 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 10 ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,86,276 ಜನರಿಗೆ ಸೋಂಕು ತಗುಲಿದ್ದು 38,017 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 408 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,39,647 ಕ್ಕೆ ಏರಿಕೆಯಾಗಿದೆ. ಇನ್ನು 8,583 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.32%ನಷ್ಟಿದೆ. ಇನ್ನು ಕೊರೊನಾ ಪ್ರಮಾಣ 3.44%ನಷ್ಟಿದೆ. ಇದೇ ಅವಧಿಯಲ್ಲಿ 89,964 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕು ತನ್ನ ಅಸ್ತಿತ್ವ ತೋರಿಸುತ್ತಿದೆ. ಇಂದು 137 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,50,844ಕ್ಕೆ ಏರಿಕೆಯಾಗಿದೆ. 206 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,28,172ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು 6 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,250 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,421 ಸಕ್ರಿಯ ಪ್ರಕರಣಗಳಿವೆ.
PublicNext
25/10/2021 06:32 pm