ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಅಸ್ತಿತ್ವ ಕಾದುಕೊಂಡಿದೆ. ಕಳೆದ 24 ಗಂಟೆಗಳಲ್ಲಿ 277 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು 7 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,86,553 ಜನರಿಗೆ ಸೋಂಕು ತಗುಲಿದ್ದು 38024 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 343 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,39,990 ಕ್ಕೆ ಏರಿಕೆಯಾಗಿದೆ. ಇನ್ನು 8,510 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.36%ನಷ್ಟಿದೆ. ಹಾಗೂ ಮರಣ ಪ್ರಮಾಣ 2.52%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 75,283 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಇಂದು 169 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,51,013 ಕ್ಕೆ ಏರಿಕೆಯಾಗಿದೆ. 123 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,28,295ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಮೂವರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,253 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,464 ಸಕ್ರಿಯ ಪ್ರಕರಣಗಳಿವೆ.
PublicNext
26/10/2021 06:32 pm