ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗಿನ ಶಾಲೆಯಲ್ಲಿ ಕೊರೊನಾ ಸ್ಫೋಟ.!

ಕೊಡಗು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ತಗ್ಗಿದ್ದ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಮಡಿಕೇರಿಯ ಗಾಳಿಬೀಡು ಸಮೀಪದ ನವೋದಯ ವಸತಿ ಶಾಲೆಯಲ್ಲಿ 21 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಪೋಷಕರಲ್ಲಿ ಆತಂಕ ಸೃಷ್ಟಿ ಶುರುವಾಗಿದೆ.

ಒಟ್ಟು 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 21 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಕೊರೊನಾ ಪಾಸಿಟಿವ್ ಬಂದ ಮಕ್ಕಳನ್ನು ಮಡಿಕೇರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಳೆ ಶಾಲೆಯ ಸಿಬ್ಬಂದಿ ಮತ್ತು ಉಳಿದ ಮಕ್ಕಳಿಗೆ ಟೆಸ್ಟ್ ಮಾಡಲಾಗುತ್ತದೆ ಎನ್ನಲಾಗಿದೆ.

Edited By : Vijay Kumar
PublicNext

PublicNext

26/10/2021 10:30 pm

Cinque Terre

26.38 K

Cinque Terre

0