ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಅಸ್ತಿತ್ವ ಕಾದುಕೊಳ್ಳುತ್ತಿದೆ. ಕಳೆದ 24 ಗಂಟೆಗಳಲ್ಲಿ 347 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 10 ಜನ ಸೋಂಕನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,88,041 ಜನರಿಗೆ ಸೋಂಕು ತಗುಲಿದ್ದು, 38,071 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 255 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,41,233ಕ್ಕೆ ಏರಿಕೆಯಾಗಿದೆ. ಇನ್ನು 8,708 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿಕೋವಿಡ್ ಪಾಸಿಟಿವಿಟಿ ಪ್ರಮಾಣ 0.31% ನಷ್ಟಿದೆ. ಹಾಗೂ ಮರಣ ಪ್ರಮಾಣ 2.88%ನಷ್ಟಿದೆ. ಇದೇ ಅವಧಿಯಲ್ಲಿ 10,868 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 166 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,51,735 ಕ್ಕೆ ಏರಿಕೆಯಾಗಿದೆ. 100 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,28,855ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ನಾಲ್ವರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,274 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,605 ಸಕ್ರಿಯ ಪ್ರಕರಣಗಳಿವೆ.
PublicNext
30/10/2021 07:53 pm