ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ನಿನ್ನೆಗಿಂತ ಕೊಂಚ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ188 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 2 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 29,88,521 ಜನರಿಗೆ ಸೋಂಕು ತಗುಲಿದ್ದು, 38,084 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 318 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,41,896 ಕ್ಕೆ ಏರಿಕೆಯಾಗಿದೆ. ಇನ್ನು 8512 ಸಕ್ರಿಯ ಪ್ರಕರಣಗಳಿವೆ. ಹಾಗೂ ಕಳೆದ 24 ಗಂಟೆಗಳಲ್ಲಿ ಕೋವಿಡ್ ಮರಣ ಪ್ರಮಾಣ 1.06% ನಷ್ಟಿದೆ. ಇನ್ನು ಖಚಿತತೆಯ ಪ್ರಮಾಣ 0.25% ನಷ್ಟಿದೆ. ಇದೇ ಅವಧಿಯಲ್ಲಿ 29,88,521 ಜನರನ್ನು ಕೋವಿಡ್ ಖಚಿತತೆಯ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಹಾವಳಿ ಪ್ರತಿದಿನವೂ ಶತಕ ದಾಟುತ್ತಿದೆ. ಇಂದು 95 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,51,967 ಕ್ಕೆ ಏರಿಕೆಯಾಗಿದೆ.
148 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,29,207ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಈವೆರಗೂ ಒಟ್ಟು 16,281 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 6,478 ಸಕ್ರಿಯ ಪ್ರಕರಣಗಳಿವೆ.
PublicNext
01/11/2021 07:30 pm