ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಹಾವಳಿ ತಗ್ಗುತ್ತಿದೆ ಇಂದು 239 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2988760 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 60711 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.39% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 376 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2942272 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 05 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38089 ಕ್ಕೆ ಏರಿಕೆಯಾಗಿದೆ. 8370 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.09% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 139 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1252106 ಕ್ಕೆ ಏರಿಕೆಯಾಗಿದೆ. 190 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1229397 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ 03 ಜನ ಸಾವನ್ನಪ್ಪಿದ್ದು ಈವೆರಗೂ ಒಟ್ಟು 16284 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6424 ಸಕ್ರಿಯ ಪ್ರಕರಣಗಳಿವೆ.
PublicNext
02/11/2021 06:16 pm