ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಕೊರೊನಾ '0': ಒಟ್ಟು 214 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದ 10 ಜಿಲ್ಲೆಗಳಲ್ಲಿ ಇಂದು ಒಂದೇ ಒಂದು ಕೋವಿಡ್ ಕೇಸ್‌ ಪತ್ತೆಯಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಆತಂಕ ನಿಧಾನವಾಗಿ ಕಡಿಮೆ ಆಗುತ್ತಿದೆ.

ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 214 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,89,489 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.26ಕ್ಕೆ ಕುಸಿದಿದೆ. ಇಂದು 80,145 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ರಾಜ್ಯದಲ್ಲಿ ಇಂದು 286 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,43,170 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 7ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,102ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 8,188 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 3.27ನಷ್ಟಿದೆ.

ಬೆಂಗಳೂರು: ನಗರದಲ್ಲಿ ಇಂದು 118 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,52,532ಕ್ಕೆ ಏರಿಕೆಯಾಗಿದೆ 117 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,29,857ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,293 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,381 ಸಕ್ರಿಯ ಪ್ರಕರಣಗಳಿವೆ.

Edited By : Vijay Kumar
PublicNext

PublicNext

05/11/2021 07:19 pm

Cinque Terre

79.29 K

Cinque Terre

0