ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹಾವಳಿ ತಗ್ಗುತ್ತಿದೆ ಇಂದು 224 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2989713 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 59144 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.37% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 317 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2943487 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 05 ಜನ ಬಲಿಯಾಗಿದ್ದು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38107 ಕ್ಕೆ ಏರಿಕೆಯಾಗಿದೆ. 8090 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.23% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 148 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1252680 ಕ್ಕೆ ಏರಿಕೆಯಾಗಿದೆ. 163 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1230020 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಂದು ಯಾವುದೇ ಸಾವು ಸಂಭವಿಸಿಲ್ಲ. ಇದುವರೆಗೂ ಸೋಂಕಿಗೆ ಒಟ್ಟು 16293 ಮಂದಿ ಮೃತಪಟ್ಟಿದ್ದಾರೆ. 6366 ಸಕ್ರಿಯ ಪ್ರಕರಣಗಳಿವೆ.
PublicNext
06/11/2021 07:10 pm