ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ನಿಧಾನವಾಗಿ ಏರಿಕೆ ಕಾಣುತ್ತಿದೆ. ಭಾನುವಾರ (ನ. 7ರಂದು) 239 ಕೇಸ್, ಸೋಮವಾರ (ನ.8ರಂದು) 283 ಕೇಸ್ ಹಾಗೂ ಮಂಗಳವಾರ 293 ಕೇಸ್‌ಗಳು ಪತ್ತೆಯಾಗಿದ್ದರೆ ಇಂದು ಈ ಸಂಖ್ಯೆ 300ರ ಗಡಿ ದಾಟಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 328 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,90,856 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.27 ನಷ್ಟಿದೆ. ಇಂದು 1,17,748 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ನಿನ್ನೆ 323 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಈ ಸಂಖ್ಯೆ ಇಂದು ತಗ್ಗಿದ್ದು, 247 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,44,669 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 9 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,131ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 8,027 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 2.74ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 176 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,53,353ಕ್ಕೆ ಏರಿಕೆಯಾಗಿದೆ 102 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,30,482ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಐಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,303 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,567 ಸಕ್ರಿಯ ಪ್ರಕರಣಗಳಿವೆ.
PublicNext
10/11/2021 08:24 pm