ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 245 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,91,614 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.24ನಷ್ಟಿದೆ. ಇಂದು 1,01,119 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ನಿನ್ನೆ 251 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಈ ಸಂಖ್ಯೆ ಇಂದು ತಗ್ಗಿದ್ದು, 247 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,45,415 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,143ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 8,027 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.22ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 154 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,53,823ಕ್ಕೆ ಏರಿಕೆಯಾಗಿದೆ 160 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,30,875ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಮೂವರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,310 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,637 ಸಕ್ರಿಯ ಪ್ರಕರಣಗಳಿವೆ.
PublicNext
13/11/2021 06:26 pm