ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿಧಾನವಾಗಿ ಇಳಿಕೆ ಕಾಣುತ್ತಿದೆ. ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 236 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,91,850 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.24ನಷ್ಟಿದೆ. ಇಂದು 96,838 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 264 ಜನ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,45,679 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,145ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,997 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.84ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 152 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,53,975ಕ್ಕೆ ಏರಿಕೆಯಾಗಿದೆ 187 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,31,062ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,312 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,600 ಸಕ್ರಿಯ ಪ್ರಕರಣಗಳಿವೆ.
PublicNext
14/11/2021 06:38 pm