ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಂದಿನ ಮಟ್ಟಿಗೆ ಇಳಿಕೆ ಹಾದಿಯಲ್ಲಿದೆ. ಕಳೆದ 24 ಗಂಟೆಗಳಲ್ಲಿ 171 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ಒಬ್ಬರು ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,92,021 ಜನರಿಗೆ ಸೋಂಕು ತಗುಲಿದ್ದು, 38,146 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 255 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,45,934ಕ್ಕೆ ಏರಿಕೆಯಾಗಿದೆ. ಇನ್ನು 7,912 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.25%ನಷ್ಟಿದೆ. ಮತ್ತು ಮರಣ ಪ್ರಮಾಣ 0.58%ನಷ್ಟಿದೆ. ಹಾಗೂ ಇದೇ ಅವಧಿಯಲ್ಲಿ 66,596 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದೆ. ಇಂದು 118 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,54,093ಕ್ಕೆ ಏರಿಕೆಯಾಗಿದೆ. 144 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,31,206ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ಆದ್ರೆ ಈವೆರಗೂ ಒಟ್ಟು 16,312 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 6,574 ಸಕ್ರಿಯ ಪ್ರಕರಣಗಳಿವೆ.
PublicNext
15/11/2021 06:58 pm