ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊರೊನಾ ಮತ್ತೆ ಉಲ್ಬಣ: ಇಂದು ರಾಜ್ಯದಲ್ಲಿ 308 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಮರಳಿ ಬರುವ ಲಕ್ಷಣ ಕಾಣುತ್ತಿದೆ. ಕಳೆದ 24 ಗಂಟೆಗಳಲ್ಲಿ 308 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ 8 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,92,584 ಜನರಿಗೆ ಸೋಂಕು ತಗುಲಿದ್ದು, 38,161 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 384 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,46,985ಕ್ಕೆ ಏರಿಕೆಯಾಗಿದೆ. ಇನ್ನು 7,409 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೊರೊನಾ ಖಚಿತತೆಯ ಪ್ರಮಾಣ 0.29%ನಷ್ಟಿದೆ. ಹಾಗೂ ಮರಣ ಪ್ರಮಾಣ 2.59%ನಷ್ಟಿದೆ. ಇನ್ನು ಇದೇ ಅವಧಿಯಲ್ಲಿ 1,04,090 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಬೆಂಗಳೂರು ನಗರ: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರೆದಿದೆ. ಇಂದು 207 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,54,463ಕ್ಕೆ ಏರಿಕೆಯಾಗಿದೆ. 256 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,32,036 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,316 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,110 ಸಕ್ರಿಯ ಪ್ರಕರಣಗಳಿವೆ.

Edited By : Nagaraj Tulugeri
PublicNext

PublicNext

17/11/2021 07:24 pm

Cinque Terre

26.83 K

Cinque Terre

0