ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲ ದಿನಗಳಿಂದ ನಿಧಾನವಾಗಿ ಏರಿಕೆ ಕಾಣುತ್ತಿದೆ. ನಿನ್ನೆ (ಬುಧವಾರ) 308 ಜನರಿಗೆ ಸೋಂಕು ದೃಢಪಟ್ಟಿತ್ತು. ಇಂದು ಈ ಸಂಖ್ಯೆ ಕೊಂಚ ಏರಿಕೆ ಕಂಡಿದೆ.
ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಇಂದು 313 ಜನರಿಗೆ ಕೊರೊನಾ ತಗುಲಿದೆ. ಈವರೆಗೂ 29,92,897 ಜನರಿಗೆ ಸೋಂಕು ದೃಢಪಟ್ಟಿದ್ದು, ಪಾಸಿಟಿವಿಟಿ ದರ ಶೇ 0.36 ನಷ್ಟಿದೆ. ಇಂದು 86,690 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.
ರಾಜ್ಯದಲ್ಲಿ ಇಂದು 369 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 29,47,354 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 4 ಜನ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38,165ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 7,349 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.27ನಷ್ಟಿದೆ.
ಬೆಂಗಳೂರು: ನಗರದಲ್ಲಿ ಇಂದು 179 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,54,642ಕ್ಕೆ ಏರಿಕೆಯಾಗಿದೆ 236 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,32,272ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 16,318 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 6,051 ಸಕ್ರಿಯ ಪ್ರಕರಣಗಳಿವೆ.
PublicNext
18/11/2021 07:27 pm