ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ಅಬ್ಬರ ಜೋರಾಗಿದ್ದು,ಕಳೆದ 24 ಗಂಟೆಗಳಲ್ಲಿ 242 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 29,93,139 ಜನರಿಗೆ ಸೋಂಕು ತಗುಲಿದ್ದು, 38,169 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 329 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,47,683ಕ್ಕೆ ಏರಿಕೆಯಾಗಿದೆ. ಇನ್ನು 7,258 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.26%ನಷ್ಟಿದೆ. ಹಾಗೂ ಮರಣ ಪ್ರಮಾಣ 1.65%ನಷ್ಟಿದೆ. ಮತ್ತು ಇದೇ ಅವಧಿಯಲ್ಲಿ 89,715 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು ನಗರ: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕು ಏರುತ್ತ ಇಳಿಯುತ್ತ ಸಾಗಿದೆ. ಇಂದು 144 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,54,786ಕ್ಕೆ ಏರಿಕೆಯಾಗಿದೆ. 235 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,32,507ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವೆರಗೂ ಒಟ್ಟು 16,320 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,958 ಸಕ್ರಿಯ ಪ್ರಕರಣಗಳಿವೆ.
PublicNext
19/11/2021 07:44 pm