ಬೆಂಗಳೂರು : ರಾಜ್ಯದಲ್ಲಿಂದು 247 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2993599 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 78037 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.31% ಕ್ಕೆ ಕುಸಿದಿದೆ.
ರಾಜ್ಯದಲ್ಲಿ ಇಂದು 278 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2948331 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 01 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38175 ಕ್ಕೆ ಏರಿಕೆಯಾಗಿದೆ. 7064 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 0.40% ನಷ್ಟಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1255054 ಕ್ಕೆ ಏರಿಕೆಯಾಗಿದೆ. 180 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1232932 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಂದು ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16323 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5798 ಸಕ್ರಿಯ ಪ್ರಕರಣಗಳಿವೆ.
PublicNext
21/11/2021 07:02 pm