ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಕುಂಟುತ್ತ ತೆವಳುತ್ತ ಸಾಗಿದೆ. ಕಳೆದ 24 ಗಂಟೆಗಳಲ್ಲಿ 178 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಈವರೆಗೂ 29,93,777 ಜನರಿಗೆ ಸೋಂಕು ತಗುಲಿದ್ದು 38,177 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 373 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 29,48,704 ಕ್ಕೆ ಏರಿಕೆಯಾಗಿದೆ. ಇನ್ನು 6,867 ಸಕ್ರಿಯ ಪ್ರಕರಣಗಳಿವೆ. ಇದರೊಂದಿಗೆ ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.31%ನಷ್ಟಿದೆ. ಹಾಗೂ ಮರಣ ಪ್ರಮಾಣ 1.12%ನಷ್ಟಿದೆ. ಇದೇ ಅವಧಿಯಲ್ಲಿ 55,699 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 112 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,55,166ಕ್ಕೆ ಏರಿಕೆಯಾಗಿದೆ. 300 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,33,232ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಒಟ್ಟು 16,324 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, 5,609 ಸಕ್ರಿಯ ಪ್ರಕರಣಗಳಿವೆ.
PublicNext
22/11/2021 06:47 pm