ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಇನ್ನೂ ಕಡಿಮೆಯಾಗಿಲ್ಲ. ಕಳೆದ 24 ಗಂಟೆಗಳಲ್ಲಿ 224 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಐದು ಜನ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಈವರೆಗೂ 29,94,001 ಜನರಿಗೆ ಸೋಂಕು ತಗುಲಿದ್ದು, 38,182 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು 379 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,49,083ಕ್ಕೆ ಏರಿಕೆಯಾಗಿದೆ. ಇನ್ನು 6,707 ಸಕ್ರಿಯ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೋವಿಡ್ ಖಚಿತತೆಯ ಪ್ರಮಾಣ 0.43%ನಷ್ಟಿದೆ. ಹಾಗೂ ಮರಣ ಪ್ರಮಾಣ 2.23%ನಷ್ಟಿದೆ. ಇದೇ ಅವಧಿಯಲ್ಲಿ 51,618 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಸೋಂಕು ಇನ್ನೂ ಕಡಿಮೆಯಾಗಿಲ್ಲ. ಇಂದು 122 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,55,288ಕ್ಕೆ ಏರಿಕೆಯಾಗಿದೆ. 300ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 12,33,532ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಈವರೆಗೂ ಒಟ್ಟು 16,325 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ 5,430 ಸಕ್ರಿಯ ಪ್ರಕರಣಗಳಿವೆ.
PublicNext
23/11/2021 07:25 pm