ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕರ್ನಾಟಕದಲ್ಲಿಂದು 254 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿಂದು 254 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 2994255 ಕ್ಕೆ ಏರಿಕೆಯಾಗಿದೆ. ಈ ಅವಧಿಯಲ್ಲಿ 65371 ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಪಾಸಿಟಿವಿಟಿ ದರ 0.38% ಕ್ಕೆ ಕುಸಿದಿದೆ.

ರಾಜ್ಯದಲ್ಲಿ ಇಂದು 546 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 2949629 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಇಂದು ಡೆಡ್ಲಿ ಸೋಂಕಿಗೆ 03 ಸಾವು ಸಂಭವಿಸಿದೆ. ಒಟ್ಟು ಸಾವನ್ನಪ್ಪಿದವರ ಸಂಖ್ಯೆ 38185 ಕ್ಕೆ ಏರಿಕೆಯಾಗಿದೆ. 6412 ಸಕ್ರಿಯ ಪ್ರಕರಣಗಳಿವೆ. ಇನ್ನು ಮರಣ ಪ್ರಮಾಣ 1.18% ನಷ್ಟಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 152 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1255440 ಕ್ಕೆ ಏರಿಕೆಯಾಗಿದೆ. 464 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1233996 ಕ್ಕೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಂದು ಹೆಮ್ಮಾರಿ ಸೋಂಕಿಗೆ ಒಂದು ಸಾವು ಸಂಭವಿಸಿದ್ದು ಈವೆರಗೂ ಒಟ್ಟು 16326 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. 5117 ಸಕ್ರಿಯ ಪ್ರಕರಣಗಳಿವೆ.

Edited By : Nirmala Aralikatti
PublicNext

PublicNext

24/11/2021 07:43 pm

Cinque Terre

40.78 K

Cinque Terre

1