ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಒಂದೇ ಶಾಲೆಯ 33 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಬೆಂಗಳೂರು: ನಗರದ ದೊಮ್ಮಸಂದ್ರದಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ 33 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ.

'ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು' ಶಿಕ್ಷಣ ಸಂಸ್ಥೆಯಲ್ಲಿ ಕೊರೊನಾ ಪ್ರಕರಣಗಳು ವರದಿಯಾಗಿವೆ. ಮಹದೇವಪುರ ವಲಯದಲ್ಲಿ ವಾಸವಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಕೋವಿಡ್ ಪೀಡಿತರಾಗಿರುವುದು ದೃಢಪಡುತ್ತಿದ್ದಂತೆ ಎಲ್ಲ ನೇರ ಹಾಗೂ ಪರೋಕ್ಷ ಸಂಪರ್ಕಿತರನ್ನು ಪರೀಕ್ಷೆ ಮಾಡಲಾಗಿದೆ.

ದಿ ಇಂಟರ್‌ನ್ಯಾಷನಲ್ ಸ್ಕೂಲ್ ಬೆಂಗಳೂರು ಶಾಲೆಯಲ್ಲಿ ಈವರೆಗೂ ವಿದ್ಯಾರ್ಥಿಗಳು ಸೇರಿದಂತೆ 497 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 8ನೇ ತರಗತಿಯ ಒಬ್ಬ ವಿದ್ಯಾರ್ಥಿ, 9ನೇ ತರಗತಿಯ 12 ವಿದ್ಯಾರ್ಥಿಗಳು, 10ನೇ ತರಗತಿಯ 8 ವಿದ್ಯಾರ್ಥಿಗಳು, 11ನೇ ತರಗತಿಯ 3 ವಿದ್ಯಾರ್ಥಿಗಳು ಹಾಗೂ 12 ತರಗತಿಯ 9 ವಿದ್ಯಾರ್ಥಿಗಳು ಕೋವಿಡ್ ಪೀಡಿತರಾಗಿದ್ದಾರೆ. 32 ವಿದ್ಯಾರ್ಥಿಗಳಿಗೆ ಸಂಸ್ಥೆಯ ವೈದ್ಯಕೀಯ ಕೇಂದ್ರದಲ್ಲಿಯೇ ಆರೈಕೆ ಮಾಡಲಾಗುತ್ತಿದೆ.

Edited By : Vijay Kumar
PublicNext

PublicNext

26/11/2021 07:45 am

Cinque Terre

58.98 K

Cinque Terre

2

ಸಂಬಂಧಿತ ಸುದ್ದಿ